Deuteronomy 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
Kannada BSI Bible 2016
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯ ಮಾಡಬೇಕೆಂದು ಆಜ್ಞಾಪಿಸಿದ್ದೇನೆ.
Kannada Bible (KNCL) BSI 2016
ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.