Deuteronomy 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದ್ದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
Kannada BSI Bible 2016
ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸ, ದ್ರಾಕ್ಷಾರಸ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.