Deuteronomy 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
Kannada BSI Bible 2016
ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಅಂಥ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ ತಾನು ಬಿಡುಗಡೆಯಾಗಿ ಹೋಗಲೊಲ್ಲೆನೆಂದು ಹೇಳುವ ಪಕ್ಷಕ್ಕೆ ನೀವು ಶಲಾಕಿಯಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು.
Kannada Bible (KNCL) BSI 2016
“ಒಂದು ವೇಳೆ ಅಂಥ ಗುಲಾಮನು ನಿಮ್ಮ ಬಳಿ ಸುಖವಾಗಿದ್ದು, ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆ ಆಗಿ ಹೋಗಲು ಒಲ್ಲೆನೆಂದು ಹೇಳಬಹುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ,