Deuteronomy 15:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
Kannada BSI Bible 2016
ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನ ಮೊದಲುಗೊಂಡು ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಲ್ಲಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
Kannada Bible (KNCL) BSI 2016
ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.