Deuteronomy 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
Kannada BSI Bible 2016
ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾಸನನ್ನು ಬಿಡುಗಡೆಮಾಡುವದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರುಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನುಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
Kannada Bible (KNCL) BSI 2016
“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.