Deuteronomy 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Kannada BSI Bible 2016
ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದನಗಳಲ್ಲಿಯೂ ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು.; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Kannada Bible (KNCL) BSI 2016
“ದನಗಳಲ್ಲೂ ಆಡುಕುರಿಗಳಲ್ಲೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.