Deuteronomy 15:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ವರ್ಷ, ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
Kannada BSI Bible 2016
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿ ವರುಷದಲ್ಲಿ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
Kannada Bible (KNCL) BSI 2016
ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.