Deuteronomy 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
Kannada BSI Bible 2016
ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.
Kannada Bible (KNCL) BSI 2016
“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.