Deuteronomy 15:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.