Deuteronomy 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಬೀಬ್ ್‌ನಬಮೇಲೆ ಚೆಲ್ಲಿ ಬಿಡಬೇಕು. ೆಲ್ನ ತಿನ್ನಬಾರದು. ಅದನ್ನು ನಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. 22ಅವುಗಳನ್ನು ನಿಮ್ಮತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
Kannada BSI Bible 2016
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.
Kannada Bible (KNCL) BSI 2016
“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.