Deuteronomy 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
Kannada BSI Bible 2016
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
Kannada Bible (KNCL) BSI 2016
ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.