Deuteronomy 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
Kannada BSI Bible 2016
ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.
Kannada Bible (KNCL) BSI 2016
“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.