Deuteronomy 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
Kannada BSI Bible 2016
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.
Kannada Bible (KNCL) BSI 2016
ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.