Deuteronomy 16:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲವಾಗಿ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
Kannada Bible (KNCL) BSI 2016
ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.