Deuteronomy 16:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
Kannada BSI Bible 2016
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
Kannada Bible (KNCL) BSI 2016
“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.