Deuteronomy 16:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
Kannada BSI Bible 2016
ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
Kannada Bible (KNCL) BSI 2016
ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.