Deuteronomy 16:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Kannada BSI Bible 2016
ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Kannada Bible (KNCL) BSI 2016
ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು.