Deuteronomy 16:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
Kannada BSI Bible 2016
ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು;
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.