Deuteronomy 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
Kannada BSI Bible 2016
ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.
Kannada Bible (KNCL) BSI 2016
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.