Deuteronomy 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
Kannada BSI Bible 2016
ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.
Kannada Bible (KNCL) BSI 2016
ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.