Deuteronomy 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
Kannada BSI Bible 2016
ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಂದು ಕೊರತೆಯಾಗಲಿ ಯಾವ ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವದು ಆತನಿಗೆ ಅಸಹ್ಯವಾಗಿದೆ.
Kannada Bible (KNCL) BSI 2016
“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.