Deuteronomy 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
Kannada BSI Bible 2016
ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬೋಧಿಸುವ ಬೋಧನೆಯಂತೆಯೂ ಅವರು ಹೇಳಿಕೊಡುವ ತೀರ್ಪಿನಂತೆಯೂ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.
Kannada Bible (KNCL) BSI 2016
ಅವರು ಕೊಡುವ ಆದೇಶದ ಪ್ರಕಾರ ಹಾಗು ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.