Deuteronomy 17:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ - ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇವಿುಸಿಕೊಳ್ಳೋಣ ಎಂದು ಹೇಳಿಕೊಳ್ಳುವ ಪಕ್ಷಕ್ಕೆ
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.