Deuteronomy 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
Kannada BSI Bible 2016
ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು.
Kannada Bible (KNCL) BSI 2016
ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.