Deuteronomy 17:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
Kannada BSI Bible 2016
ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾದರೆ ಅವನೂ ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ ಇಸ್ರಾಯೇಲ್ಯರ ನಡುವೆ ಬಾಳುವರು.
Kannada Bible (KNCL) BSI 2016
ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.