Deuteronomy 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
Kannada BSI Bible 2016
ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.
Kannada Bible (KNCL) BSI 2016
ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.