Deuteronomy 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
Kannada BSI Bible 2016
ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
Kannada Bible (KNCL) BSI 2016
ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.