Deuteronomy 17:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
Kannada BSI Bible 2016
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ
Kannada Bible (KNCL) BSI 2016
“ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.