Deuteronomy 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
Kannada BSI Bible 2016
ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ. ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆ ಹೊಂದಲಿಲ್ಲ.
Kannada Bible (KNCL) BSI 2016
ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.