Deuteronomy 18:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
Kannada BSI Bible 2016
ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಲ್ಲಿ ಹಾಗೆಯೇ ಕೋರಿಕೊಂಡು - ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳಲೂ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲೂ ನಮಗೆ ಮನಸ್ಸಿಲ್ಲ; ಕೇಳಿ ನೋಡಿದರೆ ಸತ್ತೇವು ಎಂದು ನೀವು ಹೇಳಿದಿರಷ್ಟೆ.
Kannada Bible (KNCL) BSI 2016
ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.