Deuteronomy 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.
Kannada BSI Bible 2016
ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.
Kannada Bible (KNCL) BSI 2016
ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.