Deuteronomy 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
Kannada BSI Bible 2016
ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.
Kannada Bible (KNCL) BSI 2016
“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.