Deuteronomy 19:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆಯಾದರೆ ಆ ದೋಷವು ನಿಮ್ಮದಾಗಿಯೇ ಇರುವದು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.