Deuteronomy 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.
Kannada BSI Bible 2016
ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
Kannada Bible (KNCL) BSI 2016
“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.