Deuteronomy 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು. (Verses 2-3)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
Kannada Bible (KNCL) BSI 2016
ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.