Deuteronomy 19:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
Kannada BSI Bible 2016
ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
Kannada Bible (KNCL) BSI 2016
ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.