Deuteronomy 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
Kannada BSI Bible 2016
ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು.
Kannada Bible (KNCL) BSI 2016
ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.