Deuteronomy 19:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,
Kannada BSI Bible 2016
ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆದರೆ ಆತನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ ತಾನು ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವನು. ಆಗ ಈ ಮೂರು ಪಟ್ಟಣಗಳನ್ನಲ್ಲದೆ ಇನ್ನು ಮೂರು ಪಟ್ಟಣಗಳನ್ನು ಗೊತ್ತುಮಾಡಬೇಕು.
Kannada Bible (KNCL) BSI 2016
“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.