Deuteronomy 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
Kannada BSI Bible 2016
ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
Kannada Bible (KNCL) BSI 2016
“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.