Deuteronomy 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
Kannada BSI Bible 2016
ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲ್ಯರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.)
Kannada Bible (KNCL) BSI 2016
ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಯೇಲರು ತಮಗೆ ಸರ್ವೇಶ್ವರ ಕೊಟ್ಟ ನಾಡನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ನಾಡಿನಲ್ಲಿ ವಾಸಮಾಡಿದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.