Deuteronomy 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
Kannada BSI Bible 2016
ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್‍ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರುಷ ಕಾಲ. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರೂ ಸತ್ತು ಹೋಗಿದ್ದರು.
Kannada Bible (KNCL) BSI 2016
“ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್ ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರ್ಷಕಾಲ ಆಯಿತು. ಸರ್ವೇಶ್ವರ ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರು ಸತ್ತುಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.