Deuteronomy 2:14 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
Kannada BSI Bible 2016
ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.