Deuteronomy 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
Kannada BSI Bible 2016
ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಎಷ್ಟು ಭಾಗವನ್ನಾದರೂ ಕೊಡುವದಿಲ್ಲ.
Kannada Bible (KNCL) BSI 2016
ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.