Deuteronomy 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
Kannada BSI Bible 2016
ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.
Kannada Bible (KNCL) BSI 2016
ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.