Deuteronomy 2:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
Kannada BSI Bible 2016
ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು.
Kannada Bible (KNCL) BSI 2016
ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.