Deuteronomy 2:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
Kannada BSI Bible 2016
ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನವ್ಮಿುಂದ ಕ್ರಯತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
Kannada Bible (KNCL) BSI 2016
ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲು ನೀರನ್ನೂ ಕೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.