Deuteronomy 2:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
Kannada BSI Bible 2016
ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.
Kannada Bible (KNCL) BSI 2016
ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.