Deuteronomy 2:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.
Kannada BSI Bible 2016
ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ.
Kannada Bible (KNCL) BSI 2016
ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.