Deuteronomy 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
Kannada BSI Bible 2016
ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
Kannada Bible (KNCL) BSI 2016
ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.