Deuteronomy 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
Kannada BSI Bible 2016
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.
Kannada Bible (KNCL) BSI 2016
ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.